ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ವರಾಹ ರೂಪಂ ಹಾಡಿನ ಕುರಿತು ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಚಿತ್ರಮಂದಿರ ಯೂಟ್ಯೂಬ್,ಒಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ ವರಾಹ ರೂಪಂ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ಫಾರ್ಮ್ಗಳಲ್ಲಿ ಒಪ್ಪಿಗೆ ಇಲ್ಲದೆ ಬಳಸಬಾರದು ಎಂದು ಕೇರಳದ ಕೋರ್ಟ್ ಆದೇಶ ಹೊರಡಿಸಿತ್ತು.
ಇದಕ್ಕೆ ತಲೆ ಬಾಗಿದ್ದ ಚಿತ್ರತಂಡವು ವರಾಹ ರೂಪಂ ಹಾಡನ್ನು ಚಿತ್ರಮಂದಿರ ಯೂಟ್ಯೂಬ್ನ ಹೊಂಬಾಳೆ ಫಿಲಂಸ್ನ ಚಾನಲ್ ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್ ಮಾಡಿತ್ತು. ಒಟಿಟಿಯಲ್ಲಿ ಕಾಂತಾರ ಚಿತ್ರ ಬಿಡುಗಡೆಯಾದಾಗಲೂ ಬೇರೆ ಟ್ಯೂನ್ ಬಳಸಲಾಗಿತ್ತು.
ಆ ನಂತರ ತಡೆಯಾಜ್ಞೆ ತೆರವಾಗಿ ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ ತಕ್ಷಣಕ್ಕೆ ಬರುವಂತೆ ಚಿತ್ರಮಂದಿರ ಒಟಿಟಿ ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ವರಾಹ ರೂಪಂ ಹಾಡು ಪುನಃ ಸಿಕ್ಕಿದೆ. ಸದ್ಯ ಇದೀಗ ವರಾಹರೂಪಂ ಹಾಡಿನ ಬಗ್ಗೆ ಮಾತನಾಡಲು ಒಂದು ಕಾರಣವಿದೆ ಬೆಂಗಳೂರಿನ BGK ಶಾಲೆಯ ವಿಧ್ಯಾರ್ಥಿಗಳು ವರಾಹರೂಪಂ ಹಾಡಿಗೆ ಹೆಜ್ಜೆ ಹಾಕಿದ್ದು ಮೊದಲ ಬಹುಮಾನ ಕೂಡ ಪಡಿದಿದ್ದಾರೆ. ಅವರ ಅದ್ಬುತ ನೃತ್ಯ ನೋಡಲು ಲೇಖನಿ ಕೆಳಗಿನ ವಿಡಿಯೋ ನೋಡಿ.
ಕಾಂತಾರ ಚಿತ್ರವನ್ನು ಹೊಂಬಾಳೆ ಫಿಲಂಸ್ ಸಂಸ್ಥೆಯಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು ರಿಷಭ್ ಶೆಟ್ಟಿ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ ಸಪ್ತಮಿ ಗೌಡ ಅಚ್ಯುತ್ ಕುಮಾರ್ ಕಿಶೋರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಮತ್ತು ಅರವಿಂದ್ ಅವರ ಛಾಯಾಗ್ರಹಣವಿದೆ. ಕಾಂತಾರಾ ಚಿತ್ರವು 50 ದಿನಗಳನ್ನು ಪೂರೈಸಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಕಾಂತಾರ ಸಿನಿಮಾ ರಿಷಬ್ ಶೆಟ್ಟಿ ಅವರಿಗೆ ಒಂದೊಳ್ಳೆ ಹೆಸರು ತಂದುಕೊಟ್ಟಿದ್ದು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದೆ. ಈ ಸಿನಿಮಾ ತೆರೆ ಕಂಡ ನಂತರ ರಿಷಬ್ ಶೆಟ್ಟಿಗೆ ಸಖತ್ ಡಿಮ್ಯಾಂಡ್ ಶುರುವಾಗಿದೆ. ಹ್ಯಾಷ್ಟ್ಯಾಗ್ ಎಂಬ ಮ್ಯಾಗಜಿನ್ ಕವರ್ ಪೇಜ್ಗಾಗಿ ರಿಷಬ್ ಶೆಟ್ಟಿ ಫೋಟೋಶೂಟ್ ಮಾಡಿಸಿದ್ದಾರೆ. ಡಿಸೆಂಬರ್ ತಿಂಗಳ ಸಂಚಿಕೆಯಂದು ಹ್ಯಾಷ್ಟ್ಯಾಗ್ ಮ್ಯಾಗಜಿನ್ ಮುಖಪುಟದಲ್ಲಿ ರಿಷಬ್ ಅವರ ಫೋಟೋಗಳನ್ನು ನೋಡಬಹುದು. ಗ್ರೇ ಹಾಗೂ ನೀಲಿ ಬಣ್ಣದ ಸೂಟ್ನಲ್ಲಿ ರಿಷಬ್ ಬಹಳ ಹ್ಯಾಂಡ್ಸಮ್ ಆಗಿ ಕಾಣುತ್ತಿದ್ದಾರೆ.