ವಾರ್ತಾ ಮಂಜರಿ
Trending Stories, Viral News, Gossips & Everything in Kannada

ಅಪ್ಪನಂತೆ ಡೈಲಾಗ್ ಹೊಡೆದ ವಿನೋದ್ ಪ್ರಭಾಕರ್…ಚಿಂದಿ ವಿಡಿಯೋ

9,707

Vinod Prabhakar Dialogue : ಸದ್ಯ ಡಿಸೆಂಬರ್ 3 ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬವಿದ್ದು ಈ ಬಾರಿಯ ಹುಟ್ಟುಹಬ್ಬದ ವಿಶೇಷವೆಂದರೆ ವಿನೋದ್ ಪ್ರಭಾಕರ್ ರವರು ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಹೌದು ಈ ಸಂಸ್ಥೆಯ ಮೊದಲ ಚಿತ್ರವಾಗಿ ಲಂಕಾಸುರ ಚಿತ್ರ ಕೂಡ ನಿರ್ಮಾಣವಾಗಿದ್ದು ನಿಶಾ ವಿನೋದ್ ಪ್ರಭಾಕರ್ ರವರು ಈ ಚಿತ್ರದ ನಿರ್ಮಾಪಕರಾಗಿದ್ದಾರೆ.

ಇನ್ನು ಚಿತ್ರರಂಗದ ಹುಲಿಯ ವಂಶ ಎಂಬ ಹಾಡನ್ನು ಬಿಡುಗಡೆ ಮಾಡುವ ಮೂಲಕ ಲಂಕಾಸುರ ತಂಡ ವಿನೋದ್ ಪ್ರಭಾಕರ್ ರವರಿಗೆ ವಿನೂತನವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು ಚೇತನ್ ಆಲೂರ್ ರವರು ಬರೆದಿರುವ ಈ ಹಾಡಿಗೆ ವಿಜೇತ್ ಕೃಷ್ಣ ಸಂಗೀತ ನೀಡಿದ್ದಾರೆ. ಹೌದು ಅನಿರುದ್ಧ್ ಶಾಸ್ತ್ರಿ ಹಾಗೂ ಮದ್ವೇಶ್ ಈ ಹಾಡನ್ನು ಹಾಡಿದ್ದಾರೆ. ಪ್ರಮೋದ್ ಕುಮಾರ್ ಲಂಕಾಸುರ ಚಿತ್ರವನ್ನು ನಿರ್ದೇಶಿಸಿದ್ದು ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಇನ್ನು ಲಂಕಾಸುರ ಚಿತ್ರಕ್ಕೆ ಸೆನ್ಸಾರ್‌ ಮಂಡಳಿ ಪ್ರಮಾಣ ಪತ್ರ ನೀಡಿದ್ದು ಇನ್ನು ಕೆಲವೇ ದಿನಗಳಲ್ಲಿ ಚಿತ್ರತಂಡವು ಸಿನಿಮಾ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ ಎನ್ನಲಾಗಿದೆ. ಲಂಕಾಸುರ ಸಿನಿಮಾ ನೋಡಿರುವ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ಕೂಡ ನೀಡಿದೆ.

ಸದ್ಯ ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನರ ಮೆಚ್ಚುಗೆ ಗಳಿಸಿದ್ದು ಲಂಕಾಸುರ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದ್ದು ಡಿಫರೆಂಟ್ ಡ್ಯಾನಿ ವಿನೋದ್ ಚೇತನ್ ಡಿಸೋಜ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ.

ಇನ್ನು ಪ್ರಮೋದ್ ಕುಮಾರ್ ನಿರ್ದೇಶನದ ಲಂಕಾಸುರ ಚಿತ್ರಕ್ಕೆ ವಿಜೇತ್ ಕೃಷ್ಣ ಸಂಗೀತ ನಿರ್ದೇಶನ ಸುಜ್ಞಾನ್ ಛಾಯಾಗ್ರಹಣ ಮುರಳಿ ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಇದ್ದು ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಜೊತೆಯಾಗಿದ್ದು ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಕೂಡಾ ಚಿತ್ರದಲ್ಲಿದ್ದಾರೆ. ಸದ್ಯ ವಿನೋದ್ ಪ್ರಭಾಕರ್ ಅಪ್ಪನಂತೆ ಡೈಲಾಗ್ ಹೊಡೆದ ಕ್ಷಣ ನೋಡಿ.