ವಾರ್ತಾ ಮಂಜರಿ
Trending Stories, Viral News, Gossips & Everything in Kannada

Ganga Kalyana Scheme: ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಪ್ರಯೋಜನ ಪಡೆಯಲು ಅರ್ಜಿ ಅಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ

11

ಸರ್ಕಾರವು ರೈತರ ಹಿತ ದೃಷ್ಟಿಯಿಂದ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಸದುಪಯೋಗಪಡಿಸಿ ರೈತರು ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣುತ್ತಿದ್ದಾರೆ. ರೈತರ ಹಿತದೃಷ್ಟಿಯನ್ನು ಮನದಲ್ಲಿಟ್ಟುಕೊಂಡು ಜಾರಿಗೆ ತಂದಿರುವ ಯೋಜನೆಯೇ ಗಂಗಾ ಕಲ್ಯಾಣ. ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನುಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅದಕ್ಕೆ ನಿಗಮದಿಂದ ಪಂಪ್‌ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ. ಅಂದಹಾಗೆ, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹ ಫಲಾನುಭವಿಗಳು ಈ ಯೋಜನೆ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಂದಹಾಗೆ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ-ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಗಳ ಪ್ರಯೋಜನವನ್ನು ಪಡೆಯಬಹುದಾಗಿದೆ. ಹಾಗಾದರೆ ಅರ್ಹ ಫಲಾನುಭವಿಗಳು ಯಾರು ಆಗಿರುತ್ತಾರೆ ಎನ್ನುವುದನ್ನು ತಿಳಿಯಲು ಈ ಮಾಹಿತಿಯನ್ನು ಓದಿ.

 

  • ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿರಬೇಕು.
  • ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
  • ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.
  • ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.
  • ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
    ಅದರ ಜೊತೆಗೆ, ಈ ಹಿಂದೆ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನೆ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

 

ಈ ಎಲ್ಲಾ ಮಾನದಂಡಗಳು ಅರ್ಜಿದಾರರಿಗೆ ಅಪ್ಲೈ ಆಗುತ್ತದೆ. ಅಂದಹಾಗೆ ಈ ಅರ್ಹ ಫಲಾನುಭವಿಗಳು ಸೇವಾ ಸಿಂಧು https://sevasindhu.karnataka.gov.in ಪೋರ್ಟಲ್‍ದಲ್ಲಿ 2022ರ ಅಕ್ಟೋಬರ್ 20 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದಲ್ಲದೇ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ಈ ಕುರಿತಾದ ಹೆಚ್ಚಿನ ಮಾಹಿತಿಗಾಹಿ ನಿಗಮದ https://www.dbcdc.karnataka.gov.in ವೆಬ್‍ಸೈಟ್‍ನ್ನು, ನಿಗಮದ ಸಹಾಯವಾಣಿ ಸಂಖ್ಯೆ 080-22374832, ಮೊಬೈಲ್ ಸಂಖ್ಯೆ 9606066389, 8824300400 ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು. ಈ ಮೂಲಕ ರೈತರು ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.