ವಾರ್ತಾ ಮಂಜರಿ
Trending Stories, Viral News, Gossips & Everything in Kannada

ಪೂಜೆ ಮಾಡುವಾಗ ಅಪ್ಪು ಬ್ರಾಹ್ಮಣರ ಬಳಿ ಹೇಳಿದ್ದೇನು ನೋಡಿ..ಚಿಂದಿ ವಿಡಿಯೋ

22,323

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು   ಅಗಲಿ ಅದಾಗಲೇ ಒಂದು ವರ್ಷ ಕಳೆದಿದ್ದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಇರುವ ಅಪ್ಪು ಸಮಾಧಿಗೆ ಪುನೀತ್ ಕುಟುಂಬಸ್ಥರು ಆಗಮಿಸಿ ಪೂಜೆ ಸಲ್ಲಿಸಿದರು. ಹೌದು ಜೊತೆಗೆ ಡಾ.ರಾಜ್ ಕುಮಾರ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೂ ಪೂಜೆ ಸಲ್ಲಿಸಲಾಗಿದ್ದು ಪೂಜೆ ಸಲ್ಲಿಸುತ್ತಲೇ ಪುನೀತ್ ಪತ್ನಿ ಅಶ್ವಿನಿ ಕಣ್ಣೀರು ಹಾಕಿದರು.

ಪೂಜೆ ಸಲ್ಲಿಸಿದ ನಂತರ ಅಭಿಮಾನಿಗಳಿಗೆ ಅಶ್ವಿನಿ ಭಾವುಕ ಪತ್ರ  ಕೂಡ ಬರೆದರು. ನೆನಪಿನ ಸಾಗರದಲ್ಲಿ. ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೇ ನಮ್ಮ ಆಲೋಚನೆಗಳು ಹಾಗೂ ನಾವು ಮಾಡುವ ಸತ್ಕಾರ್ಯಗಳಲ್ಲಿಯೂ ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ.

ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು ಎಂದು ಅಶ್ವಿನಿ  ಬರೆದಿದ್ದರು.

 

ಪುನೀತ್ ರಾಜ್ ಕುಮಾರ್ ಅವರ ಮೊದಲ ಪುಣ್ಯಸ್ಮರಣೆ ಸಂದರ್ಭದಲ್ಲೇ ಸರಕಾರ ಕೂಡ ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ದಕ್ಷಿಣ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಿಂದೆಯೇ ತಿಳಿಸಿದ್ದರು. ಇದರಲ್ಲಿ ಒಬ್ಬ ನಟರು ಈಗಾಗಲೇ ಒಪ್ಪಿಕೊಂಡಿದ್ದು ಮತ್ತೋರ್ವ ನಟರು ಇನ್ನೂ ಉತ್ತರಿಸಬೇಕಿದೆ ಎಂದಿದ್ದರು. ಇಬ್ಬರಿಗೂ ಕರ್ನಾಟಕದ ನಂಟಿರುವುದು ಮತ್ತೊಂದು ವಿಶೇಷ.

ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಕರ್ನಾಟಕ ಸರಕಾರವು ಆಹ್ವಾನ ನೀಡಿದ್ದು ಅಂತೆಯೇ ಈ ಇಬ್ಬರು ನಟರು ಕೂಡ ಆಗಮಿಸಿ ಕಾರ್ಯಕ್ರಮವೂ ಯಶಸ್ವಿಯಾಗಲು ಕಾರಣರಾದರು. ಹೌದಯ ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದು ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಸಾಕ್ಷಿಯಾಗಿದ್ದರು.

 

9ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನವನ್ನು ಅಶ್ವನಿ ಪುನೀತ್ ರಾಜ್​ಕುಮಾರ್​ ಅವರು ವಿಧಾನಸಭೆ ಮುಂದೆ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದರು. ಬಳಿಕ ಮನೆಗೆ ಬಂದು ಅಪ್ಪು ಫೋಟೋಗೆ ಪ್ರಶಸ್ತಿಯನ್ನು ಅರ್ಪಿಸಿದ್ದು ಈ ಪ್ರಶಸ್ತಿಯು 50 ಗ್ರಾಮ್ ತೂಕದ ಚಿನ್ನದ ಪದಕ ಸನ್ಮಾನ ಪತ್ರ ನೆನಪಿನ ಕಾಣಿಕೆ ಹಾಗೂ ಒಂದು ಶಾಲನ್ನು ಒಳಗೊಂಡಿದ್ದು ಈಗ ಈ ಚಿನ್ನದ ಪದಕವನ್ನು ಅಪ್ಪು ಫೋಟೋಗೆ ಹಾಕಿದರು.

ಅಶ್ವಿನಿ ಹಾಗು ಪುತ್ರಿ ವಂದಿತಾ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಹಿಡಿದು ಪುನೀತ್ ಭಾವಚಿತ್ರದ ಮುಂದೆ ನಿಂತಿದ್ದು ಈ ಫೋಟೋ ಹಲವು ಭಾವನಾತ್ಮಕ ಭಾವನೆಗಳನ್ಜು ಹೇಳುವಂತಿವೆ. ಬಾಳಿದ್ದು ಕೆಲವೇ ವರ್ಷವಾದ್ರೂ ಸಾಧನೆ ಮಾತ್ರ ಶಿಖರ ಮುಟ್ಟಿದೆ. ಅದೇ ಶಿಖರಕ್ಕೆ ಇವತ್ತು ಕರ್ನಾಟಕ ರತ್ನ ಪ್ರಶಸ್ತಿಯೂ ಸೇರಿಕೊಂಡಿದೆ.

ಇನ್ನು ಅಪ್ಪು ಅವರು ಪತ್ನಿ ಹಾಗು ಮಕ್ಕಳನ್ನು ಬಹಳಾನೇ ಪ್ರೀತಿಸುತ್ತಿದ್ದರು. ಎಷ್ಟು ಪ್ರಿತಿಸುತ್ತಿದ್ದರು ಎಂಬುದಕ್ಕೆ ಸಾಕ್ಷಿಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು ಅಪ್ಪು ಪತ್ನಿ ಹಾಗೂ ಮಕ್ಕಳು ಚೆನ್ನಾಗಿರಲಿ ಎಂಬ ಕಾರಣಕ್ಕಾಗಿ ಅವರ ಹೆಸರಿನಲ್ಲಿ ದೇವರ ಬಳಿ ಅರ್ಚನೆಯನ್ನ ಹೇಗೆ ಮಾಡಿಸುತ್ತಿದ್ದಾರೆ ನೀವೆ ನೋಡಿ.