ವಾರ್ತಾ ಮಂಜರಿ
Trending Stories, Viral News, Gossips & Everything in Kannada

Rashmika: ಈ ಸುದ್ದಿ ನಿಜವಾದರೆ ಇನ್ಮೇಲೆ ರಶ್ಮಿಕಾಳನ್ನು ತಡೆಯೋರು ಯಾರು ಇಲ್ಲ, ಸಿಹಿಸುದ್ದಿ

161

ಕಿರಿಕ್ ಪಾರ್ಟಿ ಸುಂದರಿ ಸಾನ್ವಿ ಅಂದರೆ ನಟಿ ರಶ್ಮಿಕಾ ಮಂದಣ್ಣ ಅವರು ದೇಶಾದ್ಯಂತ ಅಭಿಮಾನಿಗಳನ್ನು ಹೊಂದಿ​ದ್ದಾರೆ. ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಮೇಲಂತೂ ಅವರ ಚಾ​ರ್ಮ್​ ಹೆಚ್ಚಿದೆ. ಅಮಿತಾಭ್​ ಬಚ್ಚನ್​ ಜೊತೆ ಅವರು ‘ಗುಡ್​ಬೈ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಇತ್ತೀಚೆಗಷ್ಟೇ ‘ಗುಡ್​ಬೈ’ ಸಿನಿಮಾದ ಟ್ರೇಲರ್​ ಲಾಂಚ್​ ನಡೆಯಿತು. ಬಾಲಿವುಡ್​ಗೆ ಎಂಟ್ರಿ ಕೊಟ್ಟಿರೋ ರಶ್ಮಿಕಾ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಪುಷ್ಪ ಸಿನಿಮಾ ಬಳಿಕ ರಶ್ಮಿಕಾ ಕ್ರೇಜ್ ಹೆಚ್ಚಾಗಿದೆ. ಉತ್ತರ ಭಾರತದಲ್ಲೂ ಭಾರೀ ಅಭಿಮಾನಿ ಬಳಗ ಹೊಂದಿದ್ದಾರೆ.ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತ ಆಗಿದ್ದ ರಶ್ಮಿಕಾ ಮಂದಣ್ಣ ಅವರನ್ನು ಇಡೀ ಭಾರತಕ್ಕೆ ಪರಿಚಯಿಸಿದ ಕೀರ್ತಿ ‘ಪುಷ್ಪ’ ಚಿತ್ರಕ್ಕೆ ಸಲ್ಲುತ್ತದೆ. ಆ ಸಿನಿಮಾದಲ್ಲಿ ಅವರು ಮಾಡಿದ ‘ಶ್ರೀವಲ್ಲಿ’ ಎಂಬ ಪಾತ್ರ ಸಖತ್​ ಫೇಮಸ್​ ಆಯಿತು.

ಉತ್ತರ ಭಾರತದ ಒಂದಷ್ಟು ಮಂದಿ ರಶ್ಮಿಕಾ ಅವರನ್ನು ಶ್ರೀವಲ್ಲಿ ಅಂತಲೇ ಗುರುತಿಸುತ್ತಾರೆ. ಅಷ್ಟರಮಟ್ಟಿಗೆ ಅವರಿಗೆ ‘ಪುಷ್ಪ’ ಚಿತ್ರದಿಂದ ಜನಪ್ರಿಯತೆ ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರು ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದರು. ಅವರು ಚಿತ್ರರಂಗಕ್ಕೆ ಬಂದು ಕೇವಲ 6 ವರ್ಷಗಳಾಗಿವೆ. ಆಗಲೇ ಅವರು ದೊಡ್ಡ ಮಟ್ಟಕ್ಕೆ ಬೆಳೆದಿದ್ದಾರೆ. ತೆಲುಗು, ತಮಿಳು ಹಾಗೂ ಬಾಲಿವುಡ್​ನಲ್ಲಿ ಬೇಡಿಕೆಯ ನಟಿ ಆಗಿ ಹೊರಹೊಮ್ಮಿದ್ದಾರೆ. ‘ಮಿಷನ್ ಮಜ್ನು’ ಹಾಗೂ ‘ಗುಡ್​ಬೈ’ ಚಿತ್ರಗಳಲ್ಲಿ ರಶ್ಮಿಕಾ ನಟಿಸಿದ್ದು, ಈ ಚಿತ್ರಗಳು ರಿಲೀಸ್​ಗೆ ರೆಡಿ ಇದೆ.

‘ಮಿಷನ್ ಮಜ್ನು’ ಚಿತ್ರಕ್ಕೆ ಸಿದ್ದಾರ್ಥ್ ಮಲ್ಹೋತ್ರಾ ಹೀರೋ. ‘ಗುಡ್​ಬೈ’ ಚಿತ್ರದಲ್ಲಿ ಅಮಿತಾಭ್ ಬಚ್ಚನ್​ ಜತೆ ಅವರು ತೆರೆ ಹಂಚಿಕೊಳ್ಳುತ್ತಿದ್ದಾರೆ. ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಚಿತ್ರದಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಈಗಾಗಲೇ ಆರಂಭಗೊಂಡಿದೆ. ಇವುಗಳ ಮಧ್ಯೆ ಅವರು ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಾಲಿವುಡ್​ನಲ್ಲಿ ಛಾಪು ಮೂಡಿಸಿರುವ ಕಾರ್ತಿಕ್ ಆರ್ಯನ್ ಚಿತ್ರಕ್ಕೆ ರಶ್ಮಿಕಾ ನಾಯಕಿ ಎಂಬ ಸುದ್ದಿ ಕೇಳಿ ಬಂದಿದೆ.

ಆಶಿಕಿ’ ಸಿನಿಮಾಕ್ಕೆ ಹಿಂದಿಯಲ್ಲಿ ತನ್ನದೆ ಆದ ಅಭಿಮಾನಿ ಬಳಗವಿದೆ. ಮ್ಯೂಸಿಕಲ್ ಲವ್‌ ಸ್ಟೋರಿಯಾಗಿ ಹೆಸರಾಗಿದ್ದ ‘ಆಶಿಕಿ’ ಭಾರಿ ಹಿಟ್ ಆಗಿತ್ತು. 2013 ರಲ್ಲಿ ಬಿಡುಗಡೆ ಆಗಿದ್ದ ‘ಅಶಿಕಿ 2’ ಸಿನಿಮಾ ಸಹ ಅದ್ಭುತವಾದ ಹಾಡುಗಳು ಹಾಗೂ ಪ್ರೇಮಕತೆಯಿಂದಾಗಿ ಸೂಪರ್ ಹಿಟ್ ಆಗಿತ್ತು. ಇದೀಗ ‘ಆಶಿಕಿ 3′ ಸಿನಿಮಾ ತಯಾರಾಗುತ್ತಿದ್ದು, ಸಿನಿಮಾದಲ್ಲಿ ನಾಯಕಿ ಪಾತ್ರ ರಶ್ಮಿಕಾ ಮಂದಣ್ಣ ಪಾಲಾಗಿದೆ ಎನ್ನಲಾಗುತ್ತಿದೆ. ಆಶಿಕಿ 3’ ಸಿನಿಮಾವನ್ನು ಅನುರಾಗ್ ಬಸು ನಿರ್ದೇಶಿಸಲಿದ್ದಾರೆ. ಇದು ಬಸುಗೆ ಹೊಸ ಸವಾಲಾಗಿರಲಿದೆ.

ರಶ್ಮಿಕಾ ಮಂದಣ್ಣ ಅವರಿಗೆ ‘ಗುಡ್​ಬೈ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಅಕ್ಟೋಬರ್​ 7ರಂದು ಈ ಸಿನಿಮಾ ರಿಲೀಸ್​ ಆಗಲಿದೆ. ಈ ವಿಚಾರ ತಿಳಿಸಲು ಹೊಸ ಪೋಸ್ಟರ್​ ಅನಾವರಣ ಮಾಡಲಾಗಿದೆ. ಇನ್ನು ಮುಂದಿನದಿನದಲ್ಲಿ ಬಾಲಿವುಡ್ ನಲ್ಲಿ ಸದಾ ಮಿಂಚುವ ನಟಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.