ವಾರ್ತಾ ಮಂಜರಿ
Trending Stories, Viral News, Gossips & Everything in Kannada

ICC T20: ಟಿ20 ವಿಶ್ವಕಪ್ ಗೆ ಟೀಮ್ ಇಂಡಿಯಾ ಪ್ರಕಟ, ತಂಡಕ್ಕೆ ಮರಳಿದ ವೇಗದ ಸ್ಟಾರ್ ಬೌಲರ್

303

ಕಳೆದ ಏಳು–ಎಂಟು ತಿಂಗಳುಗಳಿಂದ ಭಾರತ ಕ್ರಿಕೆಟ್ ತಂಡದಲ್ಲಿ ಮಹತ್ತರವಾದ ಬದಲಾವಣೆಗಳು ನಡೆಯುತ್ತಲೇ ಇದ್ದು ಯುವ ಆಟಗಾರರಿಗೆ ಮಣೆ ಹಾಕುತ್ತಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಐಸಿಸಿ ಟಿ20 ವಿಶ್ವಕಪ್​ಗೆ ಬಲಿಷ್ಠ ಟೀಮ್ ಇಂಡಿಯಾವನ್ನು ಕಟ್ಟುತ್ತಿದೆ. ಈಗಾಗಲೇ ವಿಶ್ವಕಪ್​ಗಾಗಿ ಕಾಂಗರೂಗಳ ನಾಡಿಗೆ ತೆರಳಲು ಭಾರತ ತಂಡ ಬಹುತೇಕ ಆಯ್ಕೆಯಾಗಿದೆ. ಆದರೆ ಯಾರ್ಕರ್ ಕಿಂಗ್ ಜಸ್​ಪ್ರೀತ್ ಬುಮ್ರಾ ಅವರಿಗೆ ಇಂಜುರಿಯ ಪ್ರಮಾಣ ದೊಡ್ಡ ಮಟ್ಟದಲ್ಲಿ ಕಾಣಿಸಿಕೊಂಡ ಕಾರಣ ಇವರು ಟಿ20 ವಿಶ್ವಕಪ್​ಗೆ ಅನುಮಾನ ಎಂಬ ಸುದ್ದಿ ಹರಿದಾಡಿದೆ. ಈ ವಿಚಾರ ಹೊರಬೀಳುತ್ತಿದ್ದಂತೆ ಬಿಸಿಸಿಐ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದ್ದು ಕೆಲ ಸಮಯದಿಂದ ಭಾರತ ಟಿ20 ತಂಡದಿಂದ ಹೊರಬಿದ್ದಿದ್ದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ.

ಹೌದು ಬೆನ್ನು ನೋವಿನ ಸಮಸ್ಯೆ ಎದುರಿಸಿರುವ ಜಸ್​ಪ್ರೀತ್ ಬುಮ್ರಾ ಟಿ20 ವಿಶ್ವಕಪ್ ವೇಳೆಗೆ ಸಂಪೂರ್ಣವಾಗಿ ಗುಣಮುಖರಾಗಿ ಆಡುವುದು ಅನುಮಾನ ಎಂದು ಹೇಳಲಾಗಿದೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಏಷ್ಯಾ ಕಪ್ ಟಿ20 ಸರಣಿಯಲ್ಲೂ ಬುಮ್ರಾ ಕಣಕ್ಕಿಳಿದಿರಲಿಲ್ಲ. ಈ ಹಿಂದೆ ಜಿಂಬಾಬ್ವೆ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಹಾಗೂ ಏಷ್ಯಾಕಪ್ ಟೂರ್ನಿಯಿಂದಲೂ ಬುಮ್ರಾ ವಿಶ್ರಾಂತಿ ಪಡೆದಿದ್ದಾರೆ. ಆದರೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ವಿಶ್ವಕಪ್‌ಗೆ ಬೂಮ್ರಾ ಲಭ್ಯವಾಗಬಹುದು ಎಂಬ ನಿರೀಕ್ಷೆಯಿಟ್ಟುಕೊಳ್ಳಲಾಗಿತ್ತು. ಆದರೆ ಬಿಸಿಸಿಐನ ಅಧಿಕಾರಿಯೊಬ್ಬರು ಬುಮ್ರಾ ಆ ಹೊತ್ತಿಗೆ ಗುಣಮುಖರಾಗುವುದು ಅನುಮಾನ ಎಂದಿದ್ದಾರೆ.

ಬುಮ್ರಾ ಜಾಗಕ್ಕೆ ಮತ್ತೊಬ್ಬ ಅನುಭವಿ ಆಘಾತಕಾರಿ ಬೌಲರ್​ನ ಅವಶ್ಯಕತೆ ತಂಡಕ್ಕಿದ್ದು ಹೀಗಾಗಿ ಬಿಸಿಸಿಐ ಮೊಹಮ್ಮದ್ ಶಮಿ ಅವರಿಗೆ ಮಣೆ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ. ಶಮಿ ಕೊನೆಯದಾಗಿ ಕಳೆದ ವರ್ಷದ ಟಿ20 ವಿಶ್ವಕಪ್​ನಲ್ಲಿ ಭಾರತ ಪರ ಕಣಕ್ಕಿಳಿದಿದ್ದು ತದ ನಂತರ ಅವರಿಗೆ ಅವಕಾಶ ನೀಡಲಾಗಿಲ್ಲ. ಈ ಬಾರಿಯ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯುವುದರಿಂದ ಶಮಿಗೆ ಅಲ್ಲಿನ ಪಿಚ್​ನಲ್ಲಿ ಆಡಿದ ಅನುಭವ ಹೊಂದಿದ್ದು ಬೌನ್ಸಿ ಪಿಚ್‌ಗಳಲ್ಲಿ ಮಿಂಚುವ ಸಾಮರ್ಥ್ಯವನ್ನೂ ಹೊಂದಿದ್ದಾರೆ. ಶಮಿ ಹೊಸ ಚೆಂಡಿನಲ್ಲಿ ವಿಕೆಟ್ ಕಬಳಿಸುವುದರಲ್ಲಿ ನಿಸ್ಸೀಮರು ಎಂಬುದನ್ನು ಸಾಭೀತು ಪಡಿಸಿದ್ದಾರೆ.

ಮೊಹಮ್ಮದ್ ಶಮಿ ಭಾರತದ ಪ್ರಮುಖ ವೇಗಿಗಳಲ್ಲಿ ಒಬ್ಬರು. ಅವರ ಕೆಲಸದ ಹೊರೆ ಕಡಿಮೆ ಮಾಡಲು ಅವರನ್ನು ಟಿ20 ಮಾದರಿಯಿಂದ ದೂರ ಇಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಇಬ್ಬರು ಸೂಪರ್ ವೇಗಿಗಳು ಗಾಯಗೊಂಡಿರುವ ಕಾರಣ ಭಾರತವು ವಿಶ್ವಾಸಾರ್ಹ ಆಟಗಾರನನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಬೇಕಾಗಿದೆ. ಶಮಿಗೆ ಆಸ್ಟ್ರೇಲಿಯಾದ ಪರಿಸ್ಥಿತಿ ಚೆನ್ನಾಗಿ ಗೊತ್ತು. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಭಾರತದ ಆಯ್ಕೆ ಸಮಿತಿಯ ಸದಸ್ಯರೊಬ್ಬರು ಇನ್ಸೈಡ್ ಸ್ಪೋರ್ಟ್‌ ಜೊತೆ ಮಾತನಾಡಿದ್ದಾರೆ.