ಕಾಂತಾರ ಸಿನಿಮಾ ಹಿಟ್ ಬಳಿಕ ಚಿತ್ರತಂಡ ಕಾಂತಾರ ೨ ಸಿನಿಮಾ ಮಾಡಲು ದೈವದ ಬಳಿ ಅಪ್ಪಣೆ ಪಡೆದಿದ್ದರು. ಸದ್ಯ ಇದೀಗ ಹಿರಿಯ ನಟಿ ಶ್ರುತಿಯವರು ತನ್ನ ಮಗಳ ಜೊತೆ ಕೋಲದಲ್ಲಿ ಭಾಗಿಯಾಗಿದ್ದಾರೆ. ಹೌದು ಶ್ರುತಿ ಹಾಗೂ ಅವರ ಮಗಳು ಗೌರಿ ಮಂಗಳೂರಿಗೆ ತೆರಳಿದ್ದು ಕೊರಗಜ್ಜನ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ಕೊರಗಜ್ಜನ ಕೋಲ ಸೇವೆಯಲ್ಲಿ ಕಾಣಿಸಿಕೊಂಡ ಸುಂದರ ಕ್ಷಣದ ಫೋಟೋಗಳನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಹೌದು ಕನ್ನಡ ಸಿನಿಮಾರಂಗದಲ್ಲಿ ಸಕ್ರಿಯವಾಗಿರುವ ಶ್ರುತಿಯವರು ಸದ್ಯ ಇದೀಗ ಕಿರುತೆರೆಯಲ್ಲಿ ತೀರ್ಪುಗಾರರಾಗಿ ಬ್ಯೂಸಿಯಾಗಿದ್ದು ಶ್ರುತಿಯವರ ನಟನೆಯ 13 ಚಿತ್ರದ ಚಿತ್ರೀಕರಣವು ಮುಕ್ತಾಯವಾಗಿದೆ. ಕೆ.ನರೇಂದ್ರಬಾಬು ಅವರ ನಿರ್ದೇಶನದಲ್ಲಿ ರಾಘವೇಂದ್ರ ರಾಜ್ಕುಮಾರ್ ಶ್ರುತಿ ಪ್ರಮೋದ್ ಶೆಟ್ಟಿ ಅಭಿನಯಿಸಿರುವ ಚಿತ್ರ 13 ಯುವಿ ನಿರ್ಮಾಣದ ಅಡಿಯಲ್ಲಿ ಈ ಸಿನಿಮಾವನ್ನು ಸಂಪತ್ ಕುಮಾರ್ ಮಂಜುನಾಥ್ ಮಂಜುನಾಥಗೌಡ ಸೇರಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ಸದ್ಯ ಈ ಚಿತ್ರಕಥೆಯನ್ನು ನರೇಂದ್ರ ಬಾಬು ಹೆಣೆದಿದ್ದಾರೆ.
ಇನ್ನು ನಟ ರಾಘವೇಂದ್ರ ರಾಜ್ ಕುಮಾರ್ ರವರು ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಹಾಗೂ ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಶ್ರುತಿ ಅವರು ನಟಿಸಿದ್ದಾರೆ. ಸದ್ಯ ಈಗಾಗಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಚಿತ್ರತಂಡ ಚಿತ್ರದ ಮೇಕಿಂಗ್ ವೀಡಿಯೋ ತೋರಿಸಿ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡಿತು. ಅಂತರ್ಜಾತೀಯ ಪ್ರೇಮ ಕಥೆ ಇದಾಗಿದ್ದು ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವರೀತಿ ಕಷ್ಟಪಡುತ್ತಾರೆ ಎಂಬುದನ್ನು ಹೇಳುವ ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು. ಮುಹೂರ್ತದ ಸಂದರ್ಭದಲ್ಲಿ 3 ತಿಂಗಳಲ್ಲಿ ಮೊದಲಪ್ರತಿ ಹೊರ ತರುತ್ತೇನೆ ಎಂದು ಹೇಳಿದ್ದೆ ಆದರೆ ಸಾಕಷ್ಟು ಅಡೆತಡೆಗಳುಂಟಾಗಿ 6 ತಿಂಗಳಾಯಿತು ಎಂದರು ನಿರ್ದೇಶಕರು
ಶ್ರುತಿ ಮಾತನಾಡಿ 13 ಹೆಸರು ಮಾತ್ರ ನೆಗೆಟಿವ್ ಸಿನಿಮಾಪೂರ್ತಿ ಪಾಸಿಟಿವ್ ಆಗಿದೆ. ಇದೇ ಮೊದಲ ಬಾರಿಗೆ ಮುಸ್ಲಿಂ ಹೆಣ್ಣು ಮಗಳ ಪಾತ್ರ ಮಾಡಿದ್ದೇನೆ. ನಿರ್ದೇಶಕರು ಈ ಪಾತ್ರದ ಬಗ್ಗೆ ಹೇಳಿದಾಗ ತುಂಬಾ ಹೆದರಿದ್ದೆ. ಯಾಕೆಂದರೆ ನಾನು ಮಾಡುವ ಪಾತ್ರ ಯಾರಿಗೂ ನೋವುಂಟು ಮಾಡಬಾರದು ಅಲ್ಲದೆ ಎಲ್ಲೋ ಸ್ವಲ್ಪ ಲೋಪದೋಷ ಆದರೂ ತಂಡಕ್ಕೆ ಅಲ್ಲದೆ ವೈಯಕ್ತಿಕವಾಗಿ ನಮಗೂ ತೊಂದರೆ ಆಗುತ್ತದೆ. ಗೆಲುವಿನ ಸರದಾರ ಚಿತ್ರದ ನಂತರ ರಾಘಣ್ಣ ಜೊತೆ ಅಭಿನಯಿಸಿದ್ದೇನೆ ಎಂದು ಹೇಳಿದರು.