ಸದ್ಯ ಕಾಂತಾರ ವಿಶ್ವದಾದ್ಯಂತ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವಂತಹ ಕನ್ನಡದ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಮೊದಲಿಗೆ ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಗೊಂಡು ಪ್ರೇಕ್ಷಕರಿಂದ ತೀವ್ರ ಪ್ರಶಂಸೆ ಪಡೆದುಕೊಂಡ ಕಾಂತಾರ.
ಪ್ಯಾನ್ ಇಂಡಿಯಾ ಚಿತ್ರವಾಗಿ ಬದಲಾಯಿದ್ದು ಕನ್ನಡದಲ್ಲಿ ಬಿಡುಗಡೆಯಾಗಿ ಮೊದಲನೇ ದಿನ ಒಂದೂವರೆ ಕೋಟಿ ಗಳಿಕೆ ಮಾಡುವಲ್ಲಿ ಮಾತ್ರ ಯಶಸ್ವಿಯಾಗಿದ್ದ ಕಾಂತಾರ ಚಿತ್ರ ಪ್ಯಾನ್ ಇಂಡಿಯಾ ಚಿತ್ರವಾದ ನಂತರದ ದಿನಗಳಲ್ಲಿ ದಿನವೊಂದಕ್ಕೆ ಹತ್ತು ಕೋಟಿಗೂ ಹೆಚ್ಚು ರೂಪಾಯಿಗಳನ್ನು ಗಳಿಸಲು ಆರಂಭಿಸಿತು.
ಸದ್ಯ ಇಡೀ ಭಾರತೀಯ ಚಿತ್ರರಂಗದಲ್ಲಿ ಕೇಳಿ ಬರುತ್ತಿರುವ ಒಂದೇ ಒಂದು ಹೆಸರು ಅಂದರೆ ಅದು ಕನ್ನಡದ ಕಾಂತಾರ. ಹೌದು ಕನ್ನಡ ಅಷ್ಟೇ ಅಲ್ಲದೇ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಕಾಂತಾರ ಸದ್ದು ಜೋರಾಗುತ್ತಲೇ ಇದ್ದು ಸದ್ಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರದ ನಾಗಾಲೋಟಕ್ಕೆ ಬ್ರೇಕ್ ಬೀಳುವ ಲಕ್ಷಣಗಳೂ ಇಲ್ಲ ಎನ್ನಬಹುದು. ‘
ಸೂಪರ್ ಸ್ಟಾರ್ ರಜನಿಕಾಂತ್ ರವರು ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರು ಕಾಂತಾರ ನೋಡಿ ಬಹಳಾನೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಕನ್ನಡ ಸಿನಿಮಾಗಳು ಈಗ ಕರ್ನಾಟಕದಲ್ಲಿ ಮಾತ್ರ ಅಲ್ಲ. ವಿಶ್ವವೇ ಮಾತನಾಡುವಂತೆ ಆಗಿದೆ. ಅದರಲ್ಲೂ KGF 2 ಭರ್ಜರಿ ಹವಾ ಸೃಷ್ಟಿಸಿತ್ತು. ಎಲ್ಲೆಡೆ ಅದರ ಬಗ್ಗೆಯೇ ಮಾತನಾಡುತ್ತಿದ್ರು. ಆ ರೀತಿ ಮಟ್ಟಿಗೆ ಕನ್ನಡ ಸಿನಿಮಾಗಳು ಬೆಳೆಯುತ್ತಿವೆ.ಸದ್ಯ ಕೇರಳದ ಮುಸ್ಲಿಂ ಯುವತಿ ಹಾಡಿರುವ ಹಾಡು ನೋಡಿ.
View this post on Instagram