ವಾರ್ತಾ ಮಂಜರಿ
Trending Stories, Viral News, Gossips & Everything in Kannada

ನ್ಯಾಯ ಬೆಲೆ ಅಂಗಡಿಗಳಿಗೆ ಹೊಸದಾಗಿ ಮಂಜೂರು ಮಾಡಲು ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

148

ವಿವಿಧ ಕಾರಣಗಳಿಂದ ರದ್ದಾಗಿರುವ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೌದು,  ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನಲ್ಲಿ ಕೆಲವು ನ್ಯಾಯಬೆಲೆ ಅಂಗಡಿ ಪ್ರಾಧಿಕರಣದಾರರು ಪಡಿತರ ದುರುಪಯೋಗ, ಸಂಘಗಳ ಋಣ ಸಮಾಪನೆ, ಪ್ರಾಧಿಕರಣದಾರರ ನಿಧನ, ಪ್ರಾಧಿಕರಣದಾರರ ರಾಜಿನಾಮೆ ಸೇರಿದಂತೆ ಅನೇಕ ಕಾರಣಗಳಿಂದ ಹಾಗೂ ಈಗಾಗಲೇ ನವೀಕರಣಗೊಳ್ಳದೇ ಕೆಲವು ನ್ಯಾಯಬೆಲೆ ಅಂಗಡಿಗಳ ಪ್ರಾಧಿಕರಣಗಳು ರದ್ದಾಗಿದೆ. ಹೀಗಾಗಿ ನ್ಯಾಯಬೆಲೆ ಅಂಗಡಿ ಕೇಂದ್ರಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿದಾರರೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಂದಹಾಗೆ, ಗೌರಿಬಿದನೂರು ತಾಲ್ಲೂಕಿನ ಕೋನಾಪುರ, ಜಿ.ಕೊತ್ತೂರು, ಚೋಳಶೆಟ್ಟಹಳ್ಳಿ, ಗುಟ್ಟೇನಹಳ್ಳಿ, ನ್ಯಾಮಗೊಂಡ್ಲು, ಗುಂಡ್ಲಹಳ್ಳಿ ಗ್ರಾಮಗಳಲ್ಲಿ ನ್ಯಾಯಬೆಲೆ ಕೇಂದ್ರಗಳನ್ನು ತೆರೆಯಲು ಅರ್ಹ ಸಂಸ್ಥೆಗಳು, ಸಂಘಗಳು, ವ್ಯಕ್ತಿಗಳು, ವಿಕಲಚೇತನರು ಹಾಗೂ ತೃತೀಯ ಲಿಂಗಿಗಳುಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕಾಗಿ ತಾಲ್ಲೂಕು ಕಚೇರಿಯ ಆಹಾರ ಶಾಖೆಯಲ್ಲಿ ಅರ್ಜಿಯನ್ನು ಪಡೆದುಕೊಳ್ಳಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 27 ರ ಸಂಜೆ 5:30 ಗಂಟೆಯ ಒಳಗೆ. ಆ ದಿನದ ಒಳಗೆ ನಿಗದಿತ ಅರ್ಜಿ ನಮೂನೆ ‘ಎ’ ರಲ್ಲಿ ಭರ್ತಿ ಮಾಡಿ, ಅದರ ಜೊತೆಗೆ ದಾಖಲೆಗಳೊಂದಿಗೆ ಉಪನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ದೂರವಾಣಿ ಸಂಖ್ಯೆ: 08156-277 007 ಗೆ ಸಂಪರ್ಕಿಸಬಹುದು ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.