ವಾರ್ತಾ ಮಂಜರಿ
Trending Stories, Viral News, Gossips & Everything in Kannada

Surya Kumar Yadav: ಎಲ್ಲಾ ದಾಖಲೆಯನ್ನು ಮುರಿದು ಅತಿ ಹೆಚ್ಚು ರನ್ ಗಳಿಸಿದ ಸೂರ್ಯ ಕುಮಾರ್

842

ಬ್ಯಾಟಿಂಗ್ ನಲ್ಲಿ ನಿರಂತರ ಯಶಸ್ಸನ್ನು ಸಾಧಿಸುತ್ತಿರುವ ಕ್ರಿಕೆಟ್ ಆಟಗಾರರಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಒಬ್ಬರು. ಆದರೆ ಇದೀಗ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಹೌದು, ಬುಧವಾರ ತಿರುವನಂತಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20ಗಳ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಸಾಲಿಗೆ ಸೇರಿಕೊಂಡಿದ್ದಾರೆ.

 

ಈ ಮೊದಲು 2016ರಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 689 ರನ್ ಗಳಿಸುವ ಮೂಲಕ ಶಿಖರ್ ಧವನ್ ಟಿ20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನ್ನುವ ಕೀರ್ತಿಗೆ ಪಾತ್ರರಾಗಿದ್ದರು. ರಿಜ್ವಾನ್ 2021 ರಲ್ಲಿ 42 ಸಿಕ್ಸರ್ ಬಾರಿಸುವ ಮೂಲಕ ದಾಖಲೆಯನ್ನು ಸೃಷ್ಟಿಸಿದ್ದರು. ಸದ್ಯಕ್ಕೆ ಸೂರ್ಯಕುಮಾರ್ ಯಾದವ್ ದಾಖಲೆಯನ್ನು ಬರೆದಿದ್ದಾರೆ.

 

ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ 2022 ರಲ್ಲಿ ಟಿ 20 ಗಳಲ್ಲಿ ತಮ್ಮ ಅದ್ಭುತ ಓಟವನ್ನು ಮುಂದುವರೆಸಿಕೊಂಡು ಬಂದಿದ್ದು, 700 ಕ್ಕೂ ಹೆಚ್ಚು ರನ್‌ಗಳನ್ನು ಪೂರ್ಣಗೊಳಿಸಿರುವುದು ವಿಶೇಷವೆನ್ನಬಹುದು.  2022 ರಲ್ಲಿ ಟಿ 20 ಗಳಲ್ಲಿ ಈ ಹಿಂದೆ ದಾಖಲೆ ಬರೆದಿದ್ದ ಆಟಗಾರರನ್ನು ಮೀರಿಸಿದ್ದಾರೆ.  ಅಂದಹಾಗೆ, ಯಾದವ್ 180 ಸ್ಟ್ರೈಕ್ ರೇಟ್‌ನಲ್ಲಿ ಮತ್ತು 40 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ಈ ರನ್ ಗಳಿಸಿದ್ದಾರೆ ಎನ್ನುವುದು ಅಚ್ಚರಿಗೆ ಕಾರಣವಾಗಿದೆ.

 

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ 20 ನಲ್ಲಿ ಭಾರತವು ಏಳನೇ ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 17 ರನ್ ಗಳಿಸಿದೆ. ಆದರೆ ಈ ವೇಳೆ ನಂ.4 ರಲ್ಲಿ ಕ್ರೀಸ್ ಗೆ ಬಂದ ಯಾದವ್ ತನ್ನ ಮೊದಲ ಮೂರು ಎಸೆತಗಳಲ್ಲಿ ಎರಡು ಸಿಕ್ಸರ್‌ಗಳನ್ನು ಹೊಡೆದು ಟೀಂ ಇಂಡಿಯಾಗೆ ಬಲ ತುಂಬಿದ್ದು, ಸ್ವಲ್ಪ ಮಟ್ಟಿಗೆ ಚೇತರಿಕೆಯನ್ನು ತಂದುಕೊಟ್ಟಿತು.  33 ಎಸೆತಗಳಲ್ಲಿ 50 ರನ್ ಗಳಿಸಿದ್ದು, ಇನ್ನು ಮೂರು ಓವರ್‌ಗಳು ಬಾಕಿ ಇರುವಾಗಲೇ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ. ಹೌದು, ಇನ್ನಿಂಗ್ಸ್‌ನ ಆರಂಭದಲ್ಲಿ ಎರಡು ಸಿಕ್ಸರ್‌ ಬಾರಿಸಿದ ಯಾದವ್ ಅತಿ ಹೆಚ್ಚು ಸಿಕ್ಸರ್‌ಗಳನ್ನು ದಾಖಲಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

 

ಅಂದಹಾಗೆ, ಸೂರ್ಯ ಕುಮಾರ್ 45 ಸಿಕ್ಸರ್ ಗಳನ್ನು ಬಾರಿಸಿದ್ದು, ಇದು ಎಲ್ಲಾ ಟಿ 20 ಗಳಲ್ಲಿ ದಾಖಲೆಯಾಗಿದೆ. ಈ ಹಿಂದಿನ ಎಲ್ಲಾ ಆಟಗಾರರಿಗೆ ಹೋಲಿಕೆ ಮಾಡಿದರೆ, ಸೂರ್ಯಕುಮಾರ್ ಅದರ ಐದು ಪಟ್ಟು ಕಡಿಮೆ ಬ್ಯಾಟಿಂಗ್ ಮಾಡಿ ದಾಖಲೆ ಮುರಿದಿದ್ದಾರೆ.