ಸದ್ಯ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಬಳಿಕ ಟೀಂ ಇಂಡಿಯಾದ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ರವರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ಕಿದ್ದು ಭಾರತದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ರವರು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನ ಇತ್ತೀಚಿನ ಟಿ20 ಶ್ರೇಯಾಂಕದಲ್ಲಿ ವಿಶ್ವದ ನಂಬರ್ -1 ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದ್ದಾರೆ.
ಹೌದು ಸೂರ್ಯಕುಮಾರ್ ಯಾದವ್ ಅಗ್ರ ಬ್ಯಾಟ್ಸ್ಮನ್ ಸ್ಥಾನವನ್ನು ಉಳಿಸಿಕೊಂಡಿದ್ದು ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಬ್ಯಾಟ್ಸ್ಮನ್ಗಳ ರ್ಯಾಂಕಿಂಗ್ನಲ್ಲಿ 50ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ಸೂರ್ಯಕುಮಾರ್ ಯಾದವ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಜೇಯ 111 ರನ್ ಗಳಿಸುವ ಮೂಲಕವಾಗಿ ಶ್ರೇಯಾಂಕದಲ್ಲಿ ನಂಬರ್-1 ಸ್ಥಾನವನ್ನು ಮತ್ತಷ್ಟು ಬಲಪಡಿಸಿದ್ದು ಸೂರ್ಯಕುಮಾರ್ ಯಾದವ್ ಮೂರು ಪಂದ್ಯಗಳ ಸರಣಿಯಿಂದ 31 ರೇಟಿಂಗ್ ಅಂಕಗಳನ್ನು ಪಡೆದಿದ್ದಾರೆ.
ಹೌದು 890 ರೇಟಿಂಗ್ ಪಾಯಿಂಟ್ಗಳೊಂದಿಗೆ ಅವರು ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ಗಿಂತ 54 ರೇಟಿಂಗ್ ಪಾಯಿಂಟ್ಗಳ ಮುಂದಿದ್ದಾರೆ.ಇನ್ನು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದ ಹಾರ್ದಿಕ್ ಪಾಂಡ್ಯ ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ 30 ರನ್ ಗಳಿಸಿದ ನಂತರ ಬ್ಯಾಟ್ಸ್ಮನ್ಗಳ ನಡುವೆ ಜಂಟಿ 50 ನೇ ಸ್ಥಾನವನ್ನು ತಲುಪಿದ್ದು ಬೌಲರ್ಗಳ ಪಟ್ಟಿಯಲ್ಲಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಎರಡು ಸ್ಥಾನ ಮೇಲೇರಿ 11ನೇ ಸ್ಥಾನದಲ್ಲಿದ್ದರೆ ಎಡಗೈ ವೇಗಿ ಅರ್ಷದೀಪ್ ಸಿಂಗ್ ಒಂದು ಸ್ಥಾನ ಮೇಲೇರಿ 21ನೇ ಸ್ಥಾನಕ್ಕೆ ತಲುಪಿದ್ದಾರೆ.
ಇನ್ನು ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಎಂಟು ಸ್ಥಾನ ಮೇಲೇರಿ 40ನೇ ಸ್ಥಾನಕ್ಕೆ ತಲುಪಿದ್ದು ಭಾರತದ ದಿಗ್ಗಜ ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್ಮನ್ಗಳ ಶ್ರೇಯಾಂಕದಲ್ಲಿ ಆರನೇ ಸ್ಥಾನದೊಂದಿಗೆ ಅಗ್ರ ಭಾರತೀಯರಾಗಿದ್ದಾರೆ. ನಾಯಕ ರೋಹಿತ್ ಶರ್ಮಾ ಎಂಟನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಬೌಲರ್ಗಳ ಪಟ್ಟಿಯಲ್ಲಿ 11ನೇ ಸ್ಥಾನದಲ್ಲಿದ್ದಾರೆ.
ಇನ್ನು ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಬಾರಿಸಿದ ಟಾಪ್-1 ಪಟ್ಟಿಗೆ ಸೂರ್ಯಕುಮಾರ್ ಯಾದವ್ ಎಂಟ್ರಿ ಕೊಟ್ಟಿದ್ದು ಈ ಮೂಲಕ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಅವರ ಅಪರೂಪದ ಸಾಧನೆಯ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಮಾದರಿಯ ಕ್ರಿಕೆಟ್ನಲ್ಲಿ ಭಾರತದ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50 ಕ್ಕೂ ಹೆಚ್ಚು ರನ್ ಕಲೆಹಾಕಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಬೇರೆ ಬೇರೆ ಆಟಗಾರರು ಸ್ಥಾನ ಪಡೆದಿದ್ದು ಈ ಪಟ್ಟಿಗೆ ಹೊಸ ಸೇರ್ಪಡೆ ಸೂರ್ಯಕುಮಾರ್ ಯಾದವ್.
ಹೌದು ಚುಟುಕು ಮಾದರಿಯಲ್ಲಿ ಹೊಸ ಸಂಚಲನ ಸೃಷ್ಟಿಸಿರುವ ಸೂರ್ಯಕುಮಾರ್ ಯಾದವ್ 2022 ರಲ್ಲಿ 11 ಬಾರಿ 50 ಪ್ಲಸ್ ಸ್ಕೋರ್ ಕಲೆಹಾಕಿದ್ದು ಈ ಮೂಲಕ ಟೀಮ್ ಇಂಡಿಯಾ ಪರ ಒಂದು ವರ್ಷದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಬರೆದಿದ್ದಾರೆ. ಇನ್ನು ಕೆಳಗಿನ ವಿಡಿಯೋದಲ್ಲಿ ಸೂರ್ಯನ ಬೆಸ್ಟ್ ಕ್ರಿಕೇಟ್ ಶಾಟ್ ನೋಡಬಹುದು. ಈ ವಿಡಿಯೋ ನೋಡಿದರೆ ಸೂರ್ಯ ಯಾಕೆ ನಂಬರ್ 1 ಎಂಬುದು ತಿಳಿಯುತ್ತದೆ.