ವಾರ್ತಾ ಮಂಜರಿ
Trending Stories, Viral News, Gossips & Everything in Kannada

ಎಲ್ಲರ ಒತ್ತಾಯಕ್ಕೆ ಅದ್ಭುತವಾಗಿ ಹಾಡಿದ ರಚಿತಾರಾಮ್….ಚಿಂದಿ ವಿಡಿಯೋ

4,238

Kannada actress Rachita Ram singing: ರಚಿತಾ ರಾಮ್ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಅಂದಹಾಗೆ,ಗುಳಿ ಕೆನ್ನೆಯ ಚೆಲುವೆ ತನ್ನ ನಟನೆ ಹಾಗೂ ನಗು ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ.ಸಿನಿಮಾದಲ್ಲಿ ಬ್ಯುಸಿಯಾಗಿರುವ ಈ ನಟಿ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಯ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

ಜೊತೆಗೆ ಸ್ಟಾರ್ ನಟರ ಜೊತೆಗೆ ಸ್ಕ್ರೀನ್ ಶೇರ್ ಮಾಡಿಕೊಂಡಿರುವ ರಚಿತಾ ರಾಮ್ ಅವರ ನಟನೆಗೆ ಫಿದಾ ಆಗದವರು ಯಾರು ಇಲ್ಲ.ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ಗುಳಿ ಕೆನ್ನೆ ಬೆಡಗಿ ರಚಿತಾ ರಾಮ್ ಚಂದನವನದ ಪ್ರತಿಭಾವಂತ ನಟಿ.

ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ 2013ರಲ್ಲಿ ಚಂದನವನಕ್ಕೆ ಎಂಟ್ರಿ ಕೊಡುವ ಮೂಲಕ ಸಿನಿರಂಗದಲ್ಲಿ ಬದುಕು ಕಟ್ಟಿಕೊಂಡರು.ಅಂದಹಾಗೆ ಇವರ ಸಹೋದರಿಯೂ ಕೂಡ ಕಿರುತೆರೆಯ ನಟಿ.ಸಹೋದರಿ ನಿತ್ಯಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದ `ಬೆಂಕಿಯಲ್ಲಿ ಅರಳಿದ ಹೂವು’ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರು.

ಇದಾದ ಬಳಿಕ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಅರಸಿ’ ಸೀರಿಯಲ್‌ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿ ಕಿರುತೆರೆ ವೀಕ್ಷಕರ ಮನಸ್ಸನ್ನು ಗೆದ್ದರು.ಅಂದಹಾಗೆ, 2013 ರಲ್ಲಿ ತೆರೆಕಂಡ ಬುಲ್‌ಬುಲ್ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡ ರಚಿತಾ ರಾಮ್ ಅದೃಷ್ಟ ಖುಲಾಯಿಸಿತು. ಇದೀಗ ರಚ್ಚು ಹಾಡಿರುವ ವಿಡಿಯೋ ವೈರಲ್ ಆಗಿದೆ ನೋಡಿ.