ಚಂದನವನದಲ್ಲಿ ಸ್ಟಾರ್ ನಟನಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಸರಳತೆಯನ್ನು ಮೈಗೂಡಿಸಿಕೊಂಡಿರುವ ನಟರಲ್ಲಿ ಒಬ್ಬರು. ಅಭಿಮಾನಿಗಳ ಪ್ರೀತಿಯ ಡಿ ಬಾಸ್ (D Boss) ಅವರು ಸಿನಿ ಕೆರಿಯರ್ ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ಕಾಟೇರ ಸಿನಿಮಾದಲ್ಲಿ ಸಕ್ರಿಯರಾಗಿದ್ದು, ಬೇರೆ ಬೇರೆ ಸಿನಿಮಾ ಪ್ರಾಜೆಕ್ಟ್ ಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ.
ಪತ್ನಿ ವಿಜಯಲಕ್ಷ್ಮಿ ಜೊತೆಗೆ ಡಾನ್ಸ್ ಮಾಡಿದ್ದ ನಟ ದರ್ಶನ್
Advertisement
ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging Star Darshan) ಬ್ಯುಸಿ ಶೆಡ್ಯೂಲ್ ನಡುವೆ ಪತ್ನಿ ಹಾಗೂ ಮಗನ ಜೊತೆಗೆ ಸಮಯ ಕಳೆಯುತ್ತಾರೆ. ಇತ್ತೀಚೆಗಷ್ಟೇ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ (Vijayalakshmi) ಡಾನ್ಸ್ ಮಾಡಿರುವ ವಿಡಿಯೋವೊಂದು ವೈರಲ್ ಆಗಿತ್ತು. ಖಾಸಗಿ ಕಾರ್ಯಕ್ರಮವೊಂದರಲ್ಲಿ ದರ್ಶನ್- ವಿಜಯಲಕ್ಷ್ಮಿ ದಂಪತಿ ಡ್ಯಾನ್ಸ್ ಮಾಡಿದ್ದು, ಈ ಜೋಡಿಯ ಡಾನ್ಸ್ ನೋಡಿ ಎಲ್ಲರೂ ಫಿದಾ ಆಗಿದ್ದರು. ಆಶಿಕಿ- 2′ (Ashiq 2) ಚಿತ್ರದ ‘ಹಮ್ ತೇರೆ ಬಿನ್ ಅಬ್ ರೆಹ್ ನಹೀ ಸಕ್ತೆ’ ಹಾಡಿಗೆ ದರ್ಶನ್- ವಿಜಯಲಕ್ಷ್ಮಿ ಸಿಂಪಲ್ ಆಗಿ ಡಾನ್ಸ್ ಮಾಡಿದ್ದರು. ಈ ವೇಳೆಯಲ್ಲಿ ಅಲ್ಲೇ ಸುತ್ತ ಇದ್ದವರು ಚಪ್ಪಾಳೆ ತಟ್ಟಿ ಚಿಯರ್ ಅಪ್ ಮಾಡಿದ್ದು, ದರ್ಶನ್ ಹಾಗೂ ವಿಜಯಲಕ್ಷ್ಮಿ ಜೋಡಿಯ ಈ ಡಾನ್ಸ್ ವಿಡಿಯೋ ನೋಡಿ ಫ್ಯಾನ್ಸ್ ಫುಲ್ ಖುಷ್ ಆಗಿದ್ದರು.
Advertisement
View this post on Instagram
Advertisement
ರಕ್ಷಾ ಬಂಧನಕ್ಕೆ ಅಭಿಮಾನಿಗಳಿಗೆ ವಿಶ್ ಮಾಡಿದ್ದ ನಟ ದರ್ಶನ್
ನಟ ದರ್ಶನ್ (Darshan) ಅವರು ರಕ್ಷಾ ಬಂಧನ ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದರು. ಅವರು ತಮ್ಮ ಅಭಿಮಾನಿಗಳಿಗೆ ಅಕ್ಕತಂಗಿಯಂದಿರಿಗೆ ದರ್ಶನ್ ರಕ್ಷಾ ಬಂಧನದ ಶುಭಾಶಯಗಳನ್ನು ಕೋರಿದ್ದರು. ರಾಖಿ ಕಟ್ಟಿರುವ ಕೈ ಫೋಟೊವೊಂದನ್ನು ಶೇರ್ ಮಾಡಿಕೊಂಡು, “ಪ್ರೀತಿಯಿಂದ ಬಂದು ಹರಸಿದ ಹಾಗೂ ಎಲ್ಲಾ ನನ್ನ ಅಕ್ಕತಂಗಿಯರಿಗೆ ರಕ್ಷಾ ಬಂಧನ ಶುಭಾಶಯಗಳು” ಎಂದು ಬರೆದುಕೊಂಡಿದ್ದರು. ನಟನ ಪೋಸ್ಟ್ ಗೂ ಫ್ಯಾನ್ಸ್ ಗೂ ಪ್ರತಿಕ್ರಿಯಿಸುವ ಮೂಲಕ ವಿಶ್ ಮಾಡಿದ್ದರು.